Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:3 - ಕನ್ನಡ ಸತ್ಯವೇದವು C.L. Bible (BSI)

3 ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:3
14 ತಿಳಿವುಗಳ ಹೋಲಿಕೆ  

ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ.


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಇದನ್ನು ಕಂಡು ಸಜ್ಜನರು ನಿಬ್ಬೆರಗಾಗಿದ್ದಾರೆ ದುರ್ಜನರ ಬಗ್ಗೆ ನಿರಪರಾಧಿ ಎಚ್ಚರಗೊಂಡಿದ್ದಾನೆ.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು