Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:7 - ಕನ್ನಡ ಸತ್ಯವೇದವು C.L. Bible (BSI)

7 ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:7
12 ತಿಳಿವುಗಳ ಹೋಲಿಕೆ  

ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಕೊಬ್ಬೇರಿತ್ತು ಅವನ ಮೋರೆಯಲಿ ಬೊಜ್ಜು ಬೆಳೆದಿತ್ತು ಅವನ ಸೊಂಟದಲಿ.


ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.


“ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು