Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:1 - ಕನ್ನಡ ಸತ್ಯವೇದವು C.L. Bible (BSI)

1 ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:1
30 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II


ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು