Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:15 - ಕನ್ನಡ ಸತ್ಯವೇದವು C.L. Bible (BSI)

15 ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:15
15 ತಿಳಿವುಗಳ ಹೋಲಿಕೆ  

ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ತೆಗೆದಿಟ್ಟೆ ಬಿಲ್ಲನು ತೋಳಿನಿಂದ ಹೊರಡಿಸಿದೆ ಬಾಣಗಳನು ಅದರಿಂದ ಸೀಳಿರುವೆ ಭೂಮಿಯನು ನದಿಗಳಿಂದ.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಕಾಡಿನಾ ಕಗ್ಗಲ್ಲನು ಸೀಳಿ ಹೊರಡಿಸಿದನು ನೀರನು I ಆಳದ ಸರಸಿಯಿಂದೊ ಎಂಬಂತೆ ಅದನು ಕುಡಿಯಲಿತ್ತನು II


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು