Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:18 - ಕನ್ನಡ ಸತ್ಯವೇದವು C.L. Bible (BSI)

18 ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:18
16 ತಿಳಿವುಗಳ ಹೋಲಿಕೆ  

ಮುಕ್ತಗೊಳಿಸೆನ್ನ ಪ್ರಭು, ಎಲ್ಲಪರಾಧಗಳಿಂದ I ಕಾದಿರಿಸೆನ್ನನು ಮೂರ್ಖರ ತಿರಸ್ಕಾರದಿಂದ II


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು