Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:19 - ಕನ್ನಡ ಸತ್ಯವೇದವು C.L. Bible (BSI)

19 ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಬೆಳವದ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆತೇ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:19
12 ತಿಳಿವುಗಳ ಹೋಲಿಕೆ  

ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ನಲ್ಲ : ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ :


ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು