Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:7 - ಕನ್ನಡ ಸತ್ಯವೇದವು C.L. Bible (BSI)

7 ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:7
14 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು