Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:8 - ಕನ್ನಡ ಸತ್ಯವೇದವು C.L. Bible (BSI)

8 ‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ ಅಂದುಕೊಂಡಿದ್ದಾರೆ; ದೇಶದಲ್ಲಿರುವ ಎಲ್ಲಾ ದೇವಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:8
9 ತಿಳಿವುಗಳ ಹೋಲಿಕೆ  

ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು