Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:1 - ಕನ್ನಡ ಸತ್ಯವೇದವು C.L. Bible (BSI)

1 ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮಮಹತ್ವವು ಸಮೀಪವಾಗಿದೆ; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:1
12 ತಿಳಿವುಗಳ ಹೋಲಿಕೆ  

ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ?


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು