Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:2 - ಕನ್ನಡ ಸತ್ಯವೇದವು C.L. Bible (BSI)

2 ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:2
12 ತಿಳಿವುಗಳ ಹೋಲಿಕೆ  

ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.


ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು