Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:3 - ಕನ್ನಡ ಸತ್ಯವೇದವು C.L. Bible (BSI)

3 ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:3
12 ತಿಳಿವುಗಳ ಹೋಲಿಕೆ  

ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು