Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:4 - ಕನ್ನಡ ಸತ್ಯವೇದವು C.L. Bible (BSI)

4 ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೆಮ್ಮೆಗಾರರೇ, ಕೊಚ್ಚಿಕೊಳ್ಳಬೇಡಿರಿ; ದುಷ್ಟರೇ, ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:4
12 ತಿಳಿವುಗಳ ಹೋಲಿಕೆ  

“ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಸಜ್ಜನರಾದರೊ ಸಂತೋಷಿಸಲಿ I ದೇವರ ಮುಂದೆ ಆನಂದಿಸಲಿ I ಅತುಳ ಹರ್ಷಾನಂದಗೊಳ್ಳಲಿ II


ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು