Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:7 - ಕನ್ನಡ ಸತ್ಯವೇದವು C.L. Bible (BSI)

7 ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:7
19 ತಿಳಿವುಗಳ ಹೋಲಿಕೆ  

ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು