Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:8
15 ತಿಳಿವುಗಳ ಹೋಲಿಕೆ  

ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಮಿಶ್ರಮದ್ಯಪಾನಗಳಲ್ಲಿ ಆಸಕ್ತನಾಗಿರುವವನೇ, ದ್ರಾಕ್ಷಾರಸ ಕುಡಿಯುತ್ತ ಕಾಲಹರಣ ಮಾಡುವವನೇ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II


ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.


ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು