Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:9 - ಕನ್ನಡ ಸತ್ಯವೇದವು C.L. Bible (BSI)

9 ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬವಂಶದವರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:9
8 ತಿಳಿವುಗಳ ಹೋಲಿಕೆ  

ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು