Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಸುತ್ತಣವರೆಲ್ಲರು ಭಯಂಕರನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:11
9 ತಿಳಿವುಗಳ ಹೋಲಿಕೆ  

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು