Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:5 - ಕನ್ನಡ ಸತ್ಯವೇದವು C.L. Bible (BSI)

5 ಕೆಚ್ಚೆದೆಯ ವೀರರು ಸುಲಿಗೆಯಾಗಿ ಚಿರನಿದ್ರೆಯಲಿಹರು I ಕೈಕತ್ತರಿಸಿದಂತಿರುವರು ಆ ರಣಧೀರರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆಗೈದಿದ್ದಾರೆ; ಎಲ್ಲಾ ಶೂರರ ಕೈ ನಿಂತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಧೀರಹೃದಯದವರು ಸುಲಿಗೆಯಾಗಿ, ಅಂತಿಮ ನಿದ್ರೆ ಹೊಂದಿದ್ದಾರೆ. ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗಳನ್ನೆತ್ತಲು ಶಕ್ತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:5
10 ತಿಳಿವುಗಳ ಹೋಲಿಕೆ  

“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು