Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:11 - ಕನ್ನಡ ಸತ್ಯವೇದವು C.L. Bible (BSI)

11 ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:11
10 ತಿಳಿವುಗಳ ಹೋಲಿಕೆ  

ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II


ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು