Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:12 - ಕನ್ನಡ ಸತ್ಯವೇದವು C.L. Bible (BSI)

12 ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿಮ್ಮ ಕೃತ್ಯಗಳನ್ನು ಯೋಚಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:12
13 ತಿಳಿವುಗಳ ಹೋಲಿಕೆ  

ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ನಿನ್ನ ಪ್ರಾಚೀನ ವಿಧಿಗಳ ಜ್ಞಾಪನ I ತರುತ್ತದೆನಗೆ ಹೇ ಪ್ರಭೂ, ಸಾಂತ್ವನ II


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು