Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:2 - ಕನ್ನಡ ಸತ್ಯವೇದವು C.L. Bible (BSI)

2 ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:2
29 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ಸಂಕಟಬಂದಾಗ ನಿನಗೆ ಮೊರೆಯಿಡುವೆ I ಸದುತ್ತರ ಪಾಲಿಸುವೆಯೆಂದು ನಂಬಿರುವೆ II


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು