Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತಾಡಿಕೊಳ್ಳುವೆನು ಅಂದುಕೊಂಡು ಮನಸ್ಸಿನಲ್ಲಿ ವಿಚಾರಿಸಿಕೊಂಡದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕಮಾಡಿಕೊಂಡೆನು. ನನ್ನ ಹೃದಯದಲ್ಲಿ ನಾನು ಧ್ಯಾನ ಮಾಡಿದೆ. ನನ್ನ ಆತ್ಮದಲ್ಲಿ ಪ್ರಶ್ನೆ ಹೀಗೆ ಮೂಡುತ್ತಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:6
14 ತಿಳಿವುಗಳ ಹೋಲಿಕೆ  

ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು