Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:7 - ಕನ್ನಡ ಸತ್ಯವೇದವು C.L. Bible (BSI)

7 ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:7
13 ತಿಳಿವುಗಳ ಹೋಲಿಕೆ  

ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II


ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?


ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು