Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:8 - ಕನ್ನಡ ಸತ್ಯವೇದವು C.L. Bible (BSI)

8 ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:8
11 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು