Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:9 - ಕನ್ನಡ ಸತ್ಯವೇದವು C.L. Bible (BSI)

9 ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಕರುಣಿಸುವುದನ್ನು ಮರೆತು ಬಿಟ್ಟಿದ್ದಾರೋ? ತಮ್ಮ ಅಂತಃಕರಣವನ್ನು ಬೇಸರದಿಂದ ತಡೆಹಿಡಿದಿದ್ದಾರೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:9
10 ತಿಳಿವುಗಳ ಹೋಲಿಕೆ  

ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು