Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:12 - ಕನ್ನಡ ಸತ್ಯವೇದವು C.L. Bible (BSI)

12 ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:12
15 ತಿಳಿವುಗಳ ಹೋಲಿಕೆ  

ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II


ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು