Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:21 - ಕನ್ನಡ ಸತ್ಯವೇದವು C.L. Bible (BSI)

21 ಇದನ್ನು ಕೇಳಿ ಸಿಡಿದೆದ್ದನು ಪ್ರಭು ರೋಷದಿಂದಲೆ I ಉಕ್ಕೇರಿತಾತನ ಕೋಪ ಇಸ್ರಯೇಲರ ಮೇಲೆ I ಕಾರಿದನು ಕೋಪಾಗ್ನಿಯನು ಯಕೋಬಕುಲದ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ ಆತನ ರಕ್ಷಣೆಯನ್ನು ನಂಬದೆಯೂ ಹೋದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:21
9 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು.


ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು