Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:3 - ಕನ್ನಡ ಸತ್ಯವೇದವು C.L. Bible (BSI)

3 ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ I ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ I ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ನಮ್ಮ ಹಿರಿಯರ ಬಾಯಿಂದಲೇ ತಿಳಿದ ಸಂಗತಿಗಳನ್ನು ಅವರ ಸಂತಾನದವರಿಗೆ ಮರೆಮಾಡದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:3
9 ತಿಳಿವುಗಳ ಹೋಲಿಕೆ  

ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II


ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು