Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:38 - ಕನ್ನಡ ಸತ್ಯವೇದವು C.L. Bible (BSI)

38 ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:38
17 ತಿಳಿವುಗಳ ಹೋಲಿಕೆ  

ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.


“ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.


ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು