Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:5 - ಕನ್ನಡ ಸತ್ಯವೇದವು C.L. Bible (BSI)

5 ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಯಾಕೋಬವಂಶದಲ್ಲಿ ಕಟ್ಟಳೆಯನ್ನಿಟ್ಟು ಇಸ್ರಾಯೇಲ್ಯರಿಗೆ ನಿಯಮಮಾಡಿ ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನಂದರೆ - ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:5
21 ತಿಳಿವುಗಳ ಹೋಲಿಕೆ  

ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಈಜಿಪ್ಟರಿಗೆದುರಾಗಿ ತೆರಳಿದಂದು I ಜೋಸೆಪ್ಯರಿಗಾತ ವಿಧಿಸಿದಾಜ್ಞೆಯದು II


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.


ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು