Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:58 - ಕನ್ನಡ ಸತ್ಯವೇದವು C.L. Bible (BSI)

58 ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:58
28 ತಿಳಿವುಗಳ ಹೋಲಿಕೆ  

‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಅನ್ಯದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


“ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.


ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.


ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು