Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:6 - ಕನ್ನಡ ಸತ್ಯವೇದವು C.L. Bible (BSI)

6 “ಗೊತ್ತಾಗಲಿ ಇವೆಲ್ಲ ಮುಂದಿನ ತಲೆಮಾರಿಗೆ I ತಿಳಿಸುತ್ತ ಹೋಗಲಿ ಮಕ್ಕಳು ಮೊಮ್ಮಕ್ಕಳಿಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದರಿಂದ ಅವು ಮುಂದಿನ ತಲೆಯವರಿಗೆ ಗೊತ್ತಾಗಿ ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:6
11 ತಿಳಿವುಗಳ ಹೋಲಿಕೆ  

ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II


ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II


ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು