Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:61 - ಕನ್ನಡ ಸತ್ಯವೇದವು C.L. Bible (BSI)

61 ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ತನ್ನ ಪ್ರತಾಪವನ್ನು ಸೆರೆಗೂ ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:61
10 ತಿಳಿವುಗಳ ಹೋಲಿಕೆ  

ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.


ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ಸರ್ವೇಶ್ವರನ ಮಂಜೂಷ ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು