Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:70 - ಕನ್ನಡ ಸತ್ಯವೇದವು C.L. Bible (BSI)

70 ಆರಿಸಿಕೊಂಡನು ದಾಸ ದಾವೀದನನು I ತೆಗೆದುಕೊಂಡನು ಕುರಿಹಟ್ಟಿಯಿಂದವನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿ ಕುರಿಹಟ್ಟಿಯಿಂದ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:70
13 ತಿಳಿವುಗಳ ಹೋಲಿಕೆ  

ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು