Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:72 - ಕನ್ನಡ ಸತ್ಯವೇದವು C.L. Bible (BSI)

72 ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ ತನ್ನ ಹಸ್ತಕೌಶಲ್ಯದಿಂದ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72 ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

72 ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:72
15 ತಿಳಿವುಗಳ ಹೋಲಿಕೆ  

ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು