Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:8 - ಕನ್ನಡ ಸತ್ಯವೇದವು C.L. Bible (BSI)

8 ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:8
31 ತಿಳಿವುಗಳ ಹೋಲಿಕೆ  

ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;


ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು