Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:1 - ಕನ್ನಡ ಸತ್ಯವೇದವು C.L. Bible (BSI)

1 ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:1
25 ತಿಳಿವುಗಳ ಹೋಲಿಕೆ  

ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು