ಕೀರ್ತನೆಗಳು 79:10 - ಕನ್ನಡ ಸತ್ಯವೇದವು C.L. Bible (BSI)10 “ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ. ಅಧ್ಯಾಯವನ್ನು ನೋಡಿ |