Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:12
13 ತಿಳಿವುಗಳ ಹೋಲಿಕೆ  

ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.


ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು