Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಪ್ರಜೆಯೂ ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ ಸದಾ ನಿನ್ನನ್ನು ಸ್ತುತಿಸುವವರಾಗಿ ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:13
9 ತಿಳಿವುಗಳ ಹೋಲಿಕೆ  

ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II


ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು