Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:1
27 ತಿಳಿವುಗಳ ಹೋಲಿಕೆ  

ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು