Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:2 - ಕನ್ನಡ ಸತ್ಯವೇದವು C.L. Bible (BSI)

2 ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:2
21 ತಿಳಿವುಗಳ ಹೋಲಿಕೆ  

“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು