ಕೀರ್ತನೆಗಳು 8:4 - ಕನ್ನಡ ಸತ್ಯವೇದವು C.L. Bible (BSI)4 ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು? ಅಧ್ಯಾಯವನ್ನು ನೋಡಿ |