Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:5
18 ತಿಳಿವುಗಳ ಹೋಲಿಕೆ  

ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು.


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಅನಂತರ ಒಂದು ದಿನ ಅವನು, ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಬರಮಾಡಲೆತ್ನಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು