Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:1 - ಕನ್ನಡ ಸತ್ಯವೇದವು C.L. Bible (BSI)

1 ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:1
37 ತಿಳಿವುಗಳ ಹೋಲಿಕೆ  

ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ವರ್ಜಿಸಿದನು ಜೋಸೆಫ್ ಕುಲದ ಗುಡಾರವನು I ತ್ಯಜಿಸಿದನು ಎಫ್ರಯಿಮ್ ಕುಲದಾ ಗುಡಾರವನು II


ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II


ಒಡನೆ ಕೈ ನೀಡಿ ಕಾಪಾಡು ದೇವಾ I ಕುತ್ತಿಗೆಗೆ ಬಂದಿದೆ ತುಂಬು ಪ್ರವಾಹ II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಹೇ ದೇವಾ, ಕಿವಿಗೊಡು ನನ್ನ ಪ್ರಾರ್ಥನೆಗೆ I ವಿಮುಖನಾಗಬೇಡ ನನ್ನ ವಿಜ್ಞಾಪನೆಗೆ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು