Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವಶಕ್ತನಾದ ದೇವರೇ, ಮರಳಿ ಮುಖತೋರಿಸು I ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ ಈ ದ್ರಾಕ್ಷಾಲತೆಯನ್ನು ಪರಾಂಬರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:14
10 ತಿಳಿವುಗಳ ಹೋಲಿಕೆ  

ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II


ಸಭೆ ಸೇರಲಿ ಸಕಲ ಜನಾಂಗಗಳು ನಿನ್ನ ಸುತ್ತಲು I ನೀ ಆಸ್ಥಾನವನೇರು, ಅವರನು ಪರಿಪಾಲಿಸಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು