Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:15 - ಕನ್ನಡ ಸತ್ಯವೇದವು C.L. Bible (BSI)

15 ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:15
16 ತಿಳಿವುಗಳ ಹೋಲಿಕೆ  

ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ನನ್ನ ಕೈಯ ಆಸರೆ ಅವನಿಗಿದೆ ಸತತ I ನನ್ನ ಭುಜಬಲವು ಅವನಿಗೆ ಶಕ್ತಿಯುತ II


ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು