Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನಾವು ನಿನ್ನಿಂದ ಅಗಲುವದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. ನಮ್ಮನ್ನು ಬದುಕಿಸು. ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:18
16 ತಿಳಿವುಗಳ ಹೋಲಿಕೆ  

ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II


ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು