Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೇನಾಧೀಶ್ವರನಾದ ಯೆಹೋವದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:19
11 ತಿಳಿವುಗಳ ಹೋಲಿಕೆ  

ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಬೆಳಗಿಸಲಿ ದಾಸನನು ನಿನ್ನ ಮುಖತೇಜವು I ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು