Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:4 - ಕನ್ನಡ ಸತ್ಯವೇದವು C.L. Bible (BSI)

4 ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:4
14 ತಿಳಿವುಗಳ ಹೋಲಿಕೆ  

ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು