Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:5 - ಕನ್ನಡ ಸತ್ಯವೇದವು C.L. Bible (BSI)

5 ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರೋದನವೇ ಅವರ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:5
9 ತಿಳಿವುಗಳ ಹೋಲಿಕೆ  

ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು